ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JUNE 2024
SHIMOGA : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ (woman) ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್‌ಗೆ ನುಗ್ಗಿದೆ. ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ.
ಶಿವಮೊಗ್ಗದಿಂದ ದಾವಣಗೆರೆಯಿಂದ ತೆರಳುತ್ತಿದ್ದ ಕಾರು ಹನಸವಾಡಿ ಬಳಿ ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದು, ಪಕ್ಕದ ಹೊಟೇಲ್‌ಗೆ ನುಗ್ಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುಳಮ್ಮ ಅವರನ್ನು ಕೂಡಲೆ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಅಡಿಕೆ ಕಳ್ಳ ಅರೆಸ್ಟ್, ಸಿಕ್ತು ಲಕ್ಷ ಲಕ್ಷ ನಗದು, ಒಂದು ವಾಹನ ಸೀಜ್
ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಎರಡು ಬೈಕುಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹೊಟೇಲ್‌ಗೆ ನುಗ್ಗಿದ್ದು ಅದೃಷ್ಟವಶಾತ್ ಯಾರಿಗೂ ಸಮಸ್ಯೆಯಾಗಿಲ್ಲ. ಕಾರಿನಲ್ಲಿ ಐವರು ಇದ್ದರು. ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






