ಶಿವಮೊಗ್ಗದ ಅಪಾರ್ಟ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIMOGA, 6 SEPTEMBER 2024 : ಅಪಾರ್ಟ್‌ಮೆಂಟ್‌ (Apartment) ಒಂದಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ದುರ್ವಾಸನೆ ಹಿನ್ನೆಲೆ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಗೋಪಾಳ ಬಡಾವಣೆಯ ಅಪಾರ್ಟ್‌ಮೆಂಟ್‌ ಒಂದರ ನಿವಾಸಿ ಸುಧಾ (48) ಮೃತ ಮಹಿಳೆ. ಅವರು ತಂಗಿದ್ದ ಅಪಾರ್ಟ್‌ಮೆಂಟ್ ಮನೆ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದು ಮನೆಯ ಬಾತ್ ರೂಂನಲ್ಲಿ ಮೃತದೇಹ ಪತ್ತೆಯಾಗಿದೆ.

ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೆ ವಾಸಿಸುತ್ತಿದ್ದರು

sudhaಮನೆಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಮುರಿದು ಪರಿಶೀಲಿಸಿದಾಗ ಭಾಗಶಃ ಕೊಳೆತ ಸ್ಥಿತಿಯಲ್ಲಿ ಸುಧಾ ಅವರ ಶವ ಪತ್ತೆಯಾಗಿದೆ. ಸುಧಾ ಅವರು ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೆ ವಾಸಿಸುತ್ತಿದ್ದರು. ಇವರ ಪುತ್ರ ಬೋರ್ಡಿಂಗ್ ಶಾಲೆಯೊಂದರಲ್ಲಿ ಅಭ್ಯಾಸ ಮಾಡುತ್ತಿದ್ದಾನೆ ಎನ್ನಲಾಗಿದೆ. ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ » ಫೋನ್‌ ಬಂತು ಅಂತಾ ಎಚ್ಚರವಾಗಿ ಪಕ್ಕದ ಸೀಟ್‌ ಕಡೆ ಕಣ್ಣು ಹಾಯಿಸಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ

ಸ್ಥಳಕ್ಕೆ ಇನ್‌ಸ್ಪೆಕ್ಟರ್‌ ಕೆ.ಟಿ.ಗುರುರಾಜ್ ಅವರು ಭೇಟಿ ನೀಡಿದ್ದರು. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವು

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment