ಬಡ್ಡಿ ದಂಧೆಗೆ ಶಿವಮೊಗ್ಗದಲ್ಲಿ ಮಹಿಳೆ ಬಲಿ, ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 14 MAY 2024

SHIMOGA : ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆ.

ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ಮನೆ ಕಟ್ಟಿದ್ದರು. ಬ್ಯಾಂಕ್‌ ಸಾಲ ಸಾಲದಾಗದೆ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ ಸಾಲ ಪಡೆದಿದ್ದರು. ಈಚೆಗೆ ರಂಗನಾಥ್‌ ನಡೆಸುತ್ತಿದ್ದ ಪಾನಿಪೂರಿ ವ್ಯಾಪಾರ ಕುಂಟಿತವಾಗಿತ್ತು. ಇದರಿಂದ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಈ ವೇಳೆ ಬಡ್ಡಿಗೆ ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರು. ಮನನೊಂದಿದ್ದ ಶೋಭಾ ಅವರು ಶನಿವಾರ ರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ರಂಗನಾಥ್‌ ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳಿದಾಗ ಶೋಭಾ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ. ಕೂಡಲೆ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಶೋಭಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಯುವಕನ ಕೊಲೆ, ಘಟನೆ ಕುರಿತು ಎಸ್‌.ಪಿ ಹೇಳಿದ್ದೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment