ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಾದಿಮಹಲ್ಗಳಲ್ಲಿ ನಡೆಯುತ್ತಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ತುಂಗಾ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮದುವೆ ಸಮಾರಂಭಗಳಲ್ಲೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು (Woman Thief) ಬಂಧಿಸಿ, ಆಕೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ರುಕ್ಸಾರ್ ಫಿರ್ದೋಸ್ (30) ಎಂಬ ಮಹಿಳೆಯನ್ನು ಮಾರ್ಚ್ 7ರಂದು ವಶಕ್ಕೆ ಪಡೆಯಲಾಯಿತು. ಸೂಳೆಬೈಲು ನಿವಾಸಿಯಾದ ಈಕೆ ಮದುವೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದಳು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಂಧಿತ ಮಹಿಳೆಯಿಂದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 4 ಪ್ರಕರಣಗಳಿಗೆ ಸಂಬಂಧಿಸಿದಂತೆ 120 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ ಸುಮಾರು ₹18,00,000 ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?
ತುಂಗಾನಗರ ಪೊಲೀಸ್ ಇನ್ಸ್ಪೆಕ್ಟರ್ ಕೆ.ಟಿ. ಗುರುರಾಜ್ ಮತ್ತು ಪಿಎಸ್ಐ ಗಾದಿಲಿಂಗಪ್ಪ ಗೌಡರ್ ಅವರ ನೇತೃತ್ವದಲ್ಲಿ ಹೆಚ್.ಸಿ.ಗಳಾದ ಕಿರಣ್ ಮೋರೆ, ಅರುಣ್ ಕುಮಾರ್, ಶೋಭಾರಾಣಿ, ಸಿಬ್ಬಂದಿ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್, ರಂಗನಾಥ್ ಮತ್ತು ತಮ್ಮಣ್ಣ ಜಂಬಗಿ ಅವರ ತಂಡ ಆರೋಪಿಯನ್ನು ಬಂಧಿಸಿದೆ.

LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





