ಶಿವಮೊಗ್ಗದಿಂದ ತರೀಕೆರೆಗೆ ಹೋಗಲು ಬಸ್‌ ಹತ್ತಿದ್ದ ‌ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗ: ಕೆಎಸ್ಆರ್‌ಟಿಸಿ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಸುಮಾರು ₹1.98 ಲಕ್ಷ ಮೌಲ್ಯದ ಚಿನ್ನದ ಸರ (Gold Chain) ಹಾಗೂ ನಗದು ಕಳ್ಳತನವಾಗಿರುವ ಘಟನೆ ನಡೆದಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶ್ವೇತಾ ಎನ್.ವಿ. ಅವರು ಶಿವಮೊಗ್ಗದ ತುಂಗಾನಗರದಲ್ಲಿರುವ ತಮ್ಮ ತವರು ಮನೆಯಲ್ಲಿ ನಡೆದ ನಾಮಕರಣ ಕಾರ್ಯಕ್ರಮ ಮುಗಿಸಿ, ವಾಪಸ್ ತರೀಕೆರೆಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದರು. ಸಂಜೆ 6:10ರ ಸುಮಾರಿಗೆ ಬೆಂಗಳೂರು ಬಸ್ ಬಂದಾಗ, ಶ್ವೇತಾ ಅವರು ಬಸ್ ಹತ್ತಿದ್ದಾರೆ. ಈ ವೇಳೆ ಬಸ್‌ನಲ್ಲಿ ಭಾರಿ ಜನದಟ್ಟಣೆ ಇತ್ತು ಎಂದು ಆರೋಪಿಸಿದ್ದಾರೆ.

Shimoga-KSRTC-Bus-Stand.

Shimoga-KSRTC-Bus-Stand.

ಬಸ್ ಹತ್ತಿದ ನಂತರ ಕಂಡಕ್ಟರ್ ಬಳಿ ಟಿಕೆಟ್ ಪಡೆಯಲು ವ್ಯಾನಿಟಿ ಬ್ಯಾಗ್ ಜಿಪ್ ತೆಗೆದಾಗ, ಅದರಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಎಳೆಯ ಚಿನ್ನದ ಸರ ಹಾಗೂ ₹6,000 ನಗದು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಳುವಾದ ಬಂಗಾರದ ಸರದ ಅಂದಾಜು ಬೆಲೆ ₹1,92,000 ಎಂದು ತಿಳಿಸಲಾಗಿದೆ.

ಘಟನೆ ನಡೆದ ಬಳಿಕ ಶ್ವೇತಾ ಅವರು ತಮ್ಮ ಊರಿಗೆ ತೆರಳಿ ಮನೆಯವರೊಂದಿಗೆ ಚರ್ಚಿಸಿ, ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಶೇ.90ರಷ್ಟು ಹೊಟೇಲ್‌ಗಳು ಬಂದ್‌, ಕಾರಣವೇನು?

Sunrise Facility Services, Sri sai Trust Shimoga

Leave a Comment