ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಅವಕಾಶವಿದ್ದು, ವಿವಿಧ ಟಾಸ್ಕ್ ಪೂರೈಸಿದರೆ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಗೆ ₹11,46,273 ವಂಚಿಸಲಾಗಿದೆ.
ಇನ್ಸ್ಟಾಗ್ರಾಂನಲ್ಲಿ ಬಲೆಗೆ ಕೆಡವಿಕೊಂಡರು
ಶಿವಮೊಗ್ಗದ ಮಹಿಳೆ ಇನ್ಸ್ಟಾಗ್ರಾಂ ವಿಕ್ಷಿಸುತ್ತಿದ್ದಾಗ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ವರ್ಕ್ ಫ್ರಂ ಹೋಮ್ ಅವಕಾಶವಿದೆ ಎಂಬ ಜಾಹೀರಾತು ಗಮನಿಸಿದ್ದರು. ಇದನ್ನು ಕ್ಲಿಕ್ ಮಾಡಿದಾಗ ವಿವಿಧ ಟಾಸ್ಕ್ ಪೂರೈಸಿ ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ನಂಬಿದ ಮಹಿಳೆ ಹಣ ಪಾವತಿಸಿ ವಿವಿಧ ಟಾಸ್ಕ್ ಪೂರೈಸಿದ್ದಾರೆ. ಹತ್ತು ದಿನದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹11,46,273 ಹೂಡಿಕೆ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಹಣ ಕೇಳಿದಾಗ ಅಸಲಿ ರೂಪ ಬಯಲು
ಹೂಡಿಕೆ ಮತ್ತು ಲಾಭಾಂಶದ ಹಣವನ್ನು ಮಹಿಳೆ ವಾಪಸ್ ಕೇಳಿದ್ದರು. ಟಾಸ್ಕ್ ನೀಡಿದ್ದವರು, ‘ತಾವು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಮತ್ತಷ್ಟು ಹಣ ವರ್ಗಾಯಿಸಿದರೆ ನಿಮ್ಮ ಹಣ ಹಿಂತಿರುಗಲಿದೆ’ ಎಂದು ತಿಳಿಸಿದ್ದರು. ಆಗ ಮಹಿಳೆಗೆ ತಾನು ವಂಚನೆಗೊಳಗಾಗಿರುವುದು ಗೊತ್ತಾಗಿದೆ.
ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಅಡ್ಡಗಟ್ಟಿ ಚಿನ್ನ, ನಗದು ಕಸಿದವನು ಅರೆಸ್ಟ್, ರಂಗೋಲೆ ಹಾಕುತ್ತಿದ್ದ ಮಹಿಳೆ ಸರ ಕಿತ್ತುಕೊಂಡವನು ಜೈಲಿಗೆ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





