ಗೃಹಿಣಿಯರೆ ಹುಷಾರ್, ನಿಮಗೂ ಬರಬಹುದು ‘ವಿಕ್ಕಿ’ಯ ಮೆಸೇಜ್‌, ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ ಮಹಿಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 10 JULY 2023

SHIMOGA : ಮನೆಯಿಂದಲೆ ಕೆಲಸದ (Work From Home) ನೆಪದಲ್ಲಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 89,500 ರೂ. ವಂಚನೆ ಮಾಡಲಾಗಿದೆ. ಟೆಲಿಗ್ರಾಂ ಅಪ್ಲಿಕೇಷನ್‌ನಲ್ಲಿ ಟಾಸ್ಕ್‌ ಪೂರೈಸಿದರೆ ಕಮಿಷನ್‌ ಕೊಡುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಲಾಗಿದೆ.

ಹೇಗಾಯ್ತು ವಂಚನೆ?

ಶಿವಮೊಗ್ಗ ನಗರದ ಗೃಹಿಣಿಯೊಬ್ಬರು Work From Home ಕುರಿತು ಆನ್‌ಲೈನ್‌ನಲ್ಲಿ ಹುಡುಕಿದ್ದರು. ಅವರ ಟೆಲಿಗ್ರಾಂ ಖಾತೆಗೆ ವಿಕ್ಕಿ ಎಂಬಾತನ ಹೆಸರಿನಲ್ಲಿ ಮೆಸೇಜ್‌ ಬಂದಿದ್ದು, ಹಣ ಹೂಡಿಕೆ ಮಾಡಿ ಟಾಸ್ಕ್‌ ಪೂರೈಸಿದರೆ ಮತ್ತು ತಮ್ಮ ಉತ್ಪನ್ನಗಳನ್ನು ಖರೀದಿಸಿದರೆ ಕಮಿಷನ್‌ ನೀಡುವುದಾಗಿ ತಿಳಿಸಿದ್ದ. ಇದನ್ನು ನಂಬಿದ ಗೃಹಿಣಿ ವಾಚ್‌ ಖರೀದಿಸಿದ್ದರು. ಹಾಗಾಗಿ ಅವರ ಖಾತೆಗೆ 1500 ರೂ. ಹಣ ಕಮಿಷನ್‌ ರೂಪದಲ್ಲಿ ಬಂದಿತ್ತು.

ಇದನ್ನೂ ಓದಿ – ಶಿವಮೊಗ್ಗದ ವಿದ್ಯಾರ್ಥಿನಿ ಇನ್‌ಸ್ಟಾಗ್ರಾಂ ಖಾತೆಗೆ ಬಂತು ಎರಡು ಫ್ರೆಂಡ್‌ ರಿಕ್ವೆಸ್ಟ್‌, ಪರಿಶೀಲಿಸಿದಾಗ ಕಾದಿತ್ತು ಶಾಕ್‌

ಹಲವು ವಸ್ತುಗಳ ಖರೀದಿಗೆ ಯತ್ನ

ಮತ್ತಷ್ಟು ವಸ್ತುಗಳನ್ನು ಖರೀದಿಸಿದರೆ ಕಮಿಷನ್‌ ಹಾಕುವುದಾಗಿ ತಿಳಿಸಿ ವಿಕ್ಕಿ ಎಂಬಾತ ಫೋನ್‌ ಪೇ ಐಡಿ ಕಳುಹಿಸಿದ್ದ. ಹಲವು ವಸ್ತುಗಳ ಖರೀದಿಗೆ ಗೃಹಿಣಿ ಹಣ ವರ್ಗಾಯಿಸಿದ್ದರು. 89,500 ರೂ. ವರ್ಗಾಯಿಸಿದರೂ ಮತ್ತಷ್ಟು ಹಣ ಹಾಕುವಂತೆ ಆತ ಒತ್ತಾಯಿಸಿದ್ದ. ಇದರಿಂದ ಅನುಮಾನಗೊಂಡು ಪತಿಗೆ ವಿವರಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಈ ಹಿನ್ನೆಲೆ ಗೃಹಿಣಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.‌

crime name image

ಪಾರ್ಟ್‌ ಟೈಮ್‌ ಹೆಸರಲ್ಲಿ ವಂಚನೆ ಇದೆ ಮೊದಲಲ್ಲ

ಮನೆಯಿಂದಲೆ ಕೆಲಸ, ಪಾರ್ಟ್‌ ಟೈಮ್‌ ಉದ್ಯೋಗದ ಹೆಸರಿನಲ್ಲಿ ವಂಚನೆ ನಡೆಯುತ್ತಿರುವುದು ಇದೆ ಮೊದಲಲ್ಲ. ಹಲವು ಮಹಿಳೆಯರು, ಗೃಹಿಣಿಯರಿಗೆ ಟೆಲಿಗ್ರಾಂ ಮೂಲಕ ಮೆಸೇಜ್‌ ಮಾಡಿ, ಟಾಸ್ಕ್‌ ಪೂರೈಸುವಂತೆ ತಿಳಿಸಿ ಹಣ ವಂಚನೆ ಮಾಡಲಾಗಿದೆ. ಅನಾಮಿಕರೊಂದಿಗೆ ಹಣಕಾಸು ವ್ಯವಹಾರ ಅಪಾಯ ತಂದೊಡ್ಡಲಿದೆ. ಆದ್ದರಿಂದ ಹಣ ವರ್ಗಾಯಿಸುವುದು ಸುರಕ್ಷಿತವಲ್ಲ  ಎಂದು ಪೊಲೀಸರು ಎಚ್ಚರಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 10, 2023

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

Leave a Comment