ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021
ಕಾಂಪೌಂಡ್ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮನೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಾರಾಯಣ (49) ಮೃತ ದುರ್ದೈವಿ. ಶರಾವತಿ ನಗರದ ಮನೆಯೊಂದರಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಕಾಂಪೌಂಡ್ ಮೇಲೆ ನಿಂತು ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಆಯಾತಪ್ಪಿ ಕೆಳಗೆ ಬಿದ್ದ ನಾರಾಯಣ ಗಂಭೀರ ಗಾಯಗೊಂಡಿದ್ದರು.
ಮಾಲೀಕರೆ ಆಸ್ಪತ್ರೆಗೆ ಕರೆದೊಯ್ದರು
ನಾರಾಯಣನನ್ನು ಮನೆ ಮಾಲೀಕರೆ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ತೀವ್ರ ಸ್ವರೂರಪದ ಗಾಯವಾಗಿದ್ದರಿಂದ ನಾರಾಯಣ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಯಾವುದೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳದೆ ಗಾರೆ ಕೆಲಸಕ್ಕೆ ನಿಯೋಜಿಸಿದ ಆರೋಪದ ಹಿನ್ನೆಲೆ ಮನೆ ಮಾಲೀಕರಾದ ನಾಗರತ್ನ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ನಾರಾಯಣ ಅವರ ಕುಟುಂಬದವರ ದೂರಿನ ಹಿನ್ನೆಲೆ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200