ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 MAY 2024
SHIMOGA : ಗ್ಯಾಂಗ್ ವಾರ್‌ನಲ್ಲಿ ಗಂಭೀರ ಗಾಯಗೊಂಡಿದ್ದ ರೌಡಿ ಶೀಟರ್ ಯಾಸಿನ್ ಖುರೇಷಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಲಷ್ಕರ್ ಮೊಹಲ್ಲಾದಲ್ಲಿ ನಿನ್ನೆ ನಡೆದ ದಾಳಿ ವೇಳೆ ಯಾಸಿನ್ ಖುರೇಷಿ ಗಂಭೀರ ಗಾಯಗೊಂಡಿದ್ದ.
ಯಾಸಿನ್ ಖುರೇಷಿ ಮೇಲೆ ಆದಿಲ್ ಮತ್ತು ಆತನ ಸಹಚರರು ದಾಳಿ ನಡೆಸಿದ್ದರು. ಗಂಭೀರ ಗಾಯಗೊಂಡಿದ್ದ ಆತನನ್ನು ಶಿವಮೊಗ್ಗದ ಎನ್.ಹೆಚ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಯಾಸಿನ್ ಖುರೇಷಿ ಇವತ್ತು ಸಂಜೆ ಸಾವನ್ನಪ್ಪಿದ್ದಾನೆ.
ಬುಧವಾರ ಸಂಜೆ ಆದಿಲ್ ಮತ್ತು ಆತನ ಸಹಚರರು ಲಷ್ಕರ್ ಮೊಹಲ್ಲಾದಲ್ಲಿ ಯಾಸಿನ್ ಖುರೇಷಿ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಯಾಸಿನ್‌ನ ಸಹಚರರು ಆದಿಲ್ ಸಹಚರರಾದ ಸೊಹೇಲ್ ಅಲಿಯಾಸ್ ಸೇಬು (32) ಮತ್ತು ಗೌಸ್ (30) ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಚಪ್ಪಡಿ ಕಲ್ಲುಗಳನ್ನು ಎತ್ತಿ ಹಾಕಿ ಹತ್ಯೆ ಮಾಡಿದ್ದರು. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದ ವಿವಿಧೆಡೆ ಗುಡುಗು ಸಹಿತ ಜೋರು ಮಳೆ, ಸಿಟಿಯಲ್ಲಿ ಕವಿದ ಮೋಡ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















