ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 SEPTEMBER 2023
SHIMOGA : ಮುಖ್ಯ ರಸ್ತೆಯಲ್ಲಿ ಮಚ್ಚು ತೋರಿಸುತ್ತ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ. ಮಿಳಘಟ್ಟ ಮುಖ್ಯ ರಸ್ತೆಯಲ್ಲಿ ಚಂದನ್ ಅಲಿಯಾಸ್ ಚೋಟು (23) ಎಂಬಾತ ಮಚ್ಚು ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತ ಓಡಾಡುತ್ತಿದ್ದ. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆಯ ಪಿಎಸ್ಐ ಶೀನಿವಾಸ್, ಸಿಬ್ಬಂದಿ ರಮೇಶ್ ಮತ್ತು ನಿತಿನ್ ಸ್ಥಳಕ್ಕೆ ಭೇಟಿ ನೀಡಿ ಯುವಕನನ್ನು ವಶಕ್ಕೆ ಪಡೆದ್ದಾರೆ. ಈ ವೇಳೆ ಮಚ್ಚು ಹಿಡಿದು ಓಡಾಡುತ್ತಿರುವುಕ್ಕೆ ಕಾರಣ ಕೇಳಿದಾಗ ಉತ್ತರಿಸಲು ಯುವಕ ತಡಬಡಾಯಿಸಿದ್ದಾನೆ. ಕೂಡಲೆ ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422