ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 NOVEMBER 2023
SHIMOGA : ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ವಶಕ್ಕೆ (arrest) ಪಡೆದ ಗಸ್ತು ತಿರುಗುತ್ತಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಪ್ರಕರಣ ದಾಖಲಿಸಿದ್ದಾರೆ.
ಚಿಕ್ಕಲ್ ಬಸ್ ನಿಲ್ದಾಣದ ಸಮೀಪ ಸಯ್ಯದ್ ಜಾಫರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮಾದಕ ವಸ್ತು ಸೇವನೆ ಮಾಡಿರುವ ಅನುಮಾನದ ಮೇರೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ, ಸಿಬ್ಬಂದಿ ಕಲ್ಲನಗೌಡ, ಕಾಶಿನಾಥ್ ಅವರು ಗಸ್ತು ತಿರುಗುವಾಗ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಮತ್ತೊಂದು ರೈಲ್ವೆ ಅಂಡರ್ ಪಾಸ್, ಸಾಗರದಲ್ಲಿ ಮೇಲ್ಸೇತುವೆ, ಎಲ್ಲಿ ನಿರ್ಮಾಣವಾಗುತ್ತೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422