ಚಿಕ್ಕಲ್‌ ಬಸ್‌ ನಿಲ್ದಾಣದ ಬಳಿ ಯುವಕ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಕೇಸ್‌ ದಾಖಲು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 NOVEMBER 2023

SHIMOGA : ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ವಶಕ್ಕೆ (arrest) ಪಡೆದ ಗಸ್ತು ತಿರುಗುತ್ತಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಪ್ರಕರಣ ದಾಖಲಿಸಿದ್ದಾರೆ.

ಚಿಕ್ಕಲ್‌ ಬಸ್‌ ನಿಲ್ದಾಣದ ಸಮೀಪ ಸಯ್ಯದ್‌ ಜಾಫರ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮಾದಕ ವಸ್ತು ಸೇವನೆ ಮಾಡಿರುವ ಅನುಮಾನದ ಮೇರೆಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀಶೈಲ ಪಟ್ಟಣಶೆಟ್ಟಿ, ಸಿಬ್ಬಂದಿ ಕಲ್ಲನಗೌಡ, ಕಾಶಿನಾಥ್‌ ಅವರು ಗಸ್ತು ತಿರುಗುವಾಗ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಮತ್ತೊಂದು ರೈಲ್ವೆ ಅಂಡರ್ ಪಾಸ್, ಸಾಗರದಲ್ಲಿ ಮೇಲ್ಸೇತುವೆ, ಎಲ್ಲಿ ನಿರ್ಮಾಣವಾಗುತ್ತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 9, 2023

Leave a Comment