ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ನವೆಂಬರ್ 2021
ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಕಂಡು ಬೈಕ್ ಬಿಟ್ಟು ಇಬ್ಬರು ಯುವಕರು ಪರಾರಿಯಾಗಿದ್ದಾರೆ. ಈ ಪೈಕಿ ಒಬ್ಬನನ್ನು ಹಿಡಿದು ಪರಿಶೀಲನೆ ನಡೆಸಿದಾಗ, ಆತನ ಬಳಿ ಹರಿತವಾದ ಚಾಕು ಪತ್ತೆಯಾಗಿದೆ.
ಉಷಾ ನರ್ಸಿಂಗ್ ಹೋಂ ಸರ್ಕಲ್’ನಲ್ಲಿ ಜಯನಗರ ಠಾಣೆ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ನಂಬರ್ ಇಲ್ಲದೆ ಇರುವ ಬೈಕಿನಲ್ಲಿ ಬಂದ ಇಬ್ಬರು ಯುವಕರನ್ನು ತಡೆದು, ಪರಿಶೀಲನೆ ಆರಂಭಿಸಿದ್ದಾರೆ. ಈ ವೇಳೆ ಇಬ್ಬರು ಬೈಕ್ ಬಿಟ್ಟು ಓಡಲು ಯತ್ನಿಸಿದ್ದಾರೆ.
ಬೆನ್ನಟ್ಟಿದ ಪೊಲೀಸರು ಸಚಿನ್ ಎಂಬಾತನನ್ನು ಹಿಡಿದುಕೊಂಡಿದ್ದಾರೆ. ಪರಿಶೀಲನೆ ನಡೆಸಿದಾಗ ಆತನ ಬಳಿ ಚಾಕು ಪತ್ತೆಯಾಗಿದೆ. ಅಶ್ವಲ್ ಎಂಬಾತ ಎಸ್ಕೇಪ್ ಆಗಿದ್ದಾನೆ.
ಪಿಎಸ್ಐ ರಾಹತ್ ಅಲಿ, ಸಿಬ್ಬಂದಿಗಳಾದ ಶಿವರಾಜ್ ನಾಯಕ್, ಆದರ್ಶ ಅವರು ವಾಹನ ತಪಾಸಣೆ ನಡೆಸುತ್ತಿದ್ದಾಗ ಘಟನೆ ಸಂಭವಿಸಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






