ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022
ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಬಳಿ ಕಾರು, ಬೈಕ್ ಡಿಕ್ಕಿಯಾಗಿ ಯುವಕನೊಬ್ಬ ಡ್ರಾಗರ್ ತೋರಿಸಿ ಬೆದರಿಸಿದ್ದಾನೆ. ಪೊಲೀಸರು ಆತನನ್ನು ಬಂಧಿಸಿದ್ದು, ಬೈಕ್ ವಶಕ್ಕೆ ಪಡೆದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಂಧಿತನನ್ನು ದರ್ಶನ್ ಎಂದು ಗುರುತಿಸಲಾಗಿದೆ. ಅಮೀರ್ ಅಹಮದ್ ಸರ್ಕಲ್’ನಿಂದ ನೆಹರೂ ರಸ್ತೆ ಕಡೆ ಹೋಗುವ ಮಾರ್ಗದಲ್ಲಿ, ಸಿಟಿ ಸೆಂಟರ್ ಮಾಲ್ ಬಳಿ ಘಟನೆ ಸಂಭವಿಸಿದೆ.
ಏನಿದು ಪ್ರಕರಣ?
ದರ್ಶನ್ ಚಲಾಯಿಸುತ್ತಿದ್ದ ಬೈಕ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿತ್ತು. ಈ ವೇಳೆ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ದರ್ಶನ್ ತನ್ನ ಸೊಂಟದಲ್ಲಿದ್ದ ಡ್ರಾಗರ್ ಪ್ರದರ್ಶಿಸಿ ಬೆದರಿಸಿದ್ದಾನೆ.
ಇದೆ ವೇಳೆ ಸ್ಥಳಕ್ಕೆ ಭೇಟಿ ನೀಡಿದ ದೊಡ್ಡಪೇಟೆ ಠಾಣೆ ಪಿಎಸ್ಐ ಸತೀಶ್ ನಾಯ್ಕ್, ಕೂಡಲೆ ದರ್ಶನ್ ಅನ್ನು ಬಂಧಿಸಿದ್ದಾರೆ. ಡ್ರಾಗರ್, ಬೈಕ್ ವಶಕ್ಕೆ ಪಡೆದಿದ್ದಾರೆ.
ಮಾರಕಾಸ್ತ್ರ ಪ್ರದರ್ಶಿಸಿ ಜನರಲ್ಲಿ ಆತಂಕ ಮೂಡಿಸಿದ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.