| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 25 DECEMBER 2023
SHIMOGA : ನಗರದ ಫ್ರೀಡಂ ಪಾರ್ಕ್‌ನಲ್ಲಿ ಯುವಕನೊಬ್ಬನಿಗೆ ಚೂಪಾದ ವಸ್ತುವಿನಿಂದ ಹಲ್ಲೆ ಮಾಡಲಾಗಿದೆ. ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿದ್ದ ಯುವಕನ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫ್ರೀಡಂ ಪಾರ್ಕ್‌ನಲ್ಲಿ ಆಗಿದ್ದೇನು?
ಶಶಿಕುಮಾರ್ (35) ಎಂಬಾತನ ಮೇಲೆ ಐವರ ಗುಂಪು ಗಂಭೀರ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಶಶಿಕುಮಾರ್‌ನ ತಲೆಗೆ ಹೊಡೆಯಲಾಗಿದೆ. ಕೈ ಮತ್ತು ಹೊಟ್ಟೆಗೆ ಇರಿಯಲಾಗಿದೆ. ಗಂಭೀರ ಗಾಯಗೊಂಡಿದ್ದ ಶಶಿಕುಮಾರ್ ಫ್ರೀಡಂ ಪಾರ್ಕ್‌ನ ವಾಕಿಂಗ್ ಪಾಥ್‌ನಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ರಕ್ಷಣೆಗಾಗಿ ಮೊರೆ ಇಟ್ಟಿದ್ದ.
ಘಟನೆಗೆ ಕಾರಣವೇನು?
ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವೊಂದರಲ್ಲಿ ಕ್ಷುಲಕ ವಿಚಾರಕ್ಕೆ ನಡೆದ ಗಲಾಟೆ ಈ ಹಂತಕ್ಕೆ ತಲುಪಿದೆ ಎಂದು ಪೊಲೀಸ್ ಮೂಲ ತಿಳಿಸಿದೆ. ರೌಡಿ ಹಿನ್ನೆಲೆ ಇರುವ ಕೆಲವರು ಶಶಿಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಶಶಿಕುಮಾರ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಸಿಟಿ ಬಸ್ಸಿನಲ್ಲಿ ಮೊಬೈಲ್ ಬಳಸಿದ ಚಾಲಕ, ಫೋಟೊ ತೆಗೆದ ಪ್ರಯಾಣಿಕ, ಮುಂದೇನಾಯ್ತು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()