ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | Crime News Today | 12 ಏಪ್ರಿಲ್ 2022
ಸಾಲದ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗೋಂಧಿ ಚಟ್ನಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಶಬರೀಶ (32) ಹಲ್ಲೆಗೊಳಗಾದವರು. ಹರೀಶ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸಾಲದ ಹಣಕ್ಕೆ ಗಲಾಟೆ
ಹರೀಶನಿಗೆ ಶಬರೀಶ 40 ಸಾವರ ರೂ. ಹಣವನ್ನು ಸಾಲವಾಗಿ ನೀಡಿದ್ದರು. ಅದನ್ನು ಹಿಂತಿರುಗಿಸುವಂತೆ ಪದೇ ಪದೆ ಕೇಳುತ್ತಿದ್ದರು. ಶುಕ್ರವಾರ ರಾತ್ರಿ ಗೋಂಧಿ ಚಟ್ನಳ್ಳಿ ಗ್ರಾಮದ ರಸ್ತೆಯಲ್ಲಿ ಹರೀಶ ಸಿಕ್ಕಾಗ ಹಣ ಹಿಂತಿರುಗಿಸುವಂತೆ ಶಬರೀಶ ಕೇಳಿದ್ದಾರೆ. ಆಗ ಗಲಾಟೆಯಾಗಿದೆ.
ಮಾತಿಗೆ ಮಾತು ಬೆಳೆದು ಹರೀಶ ತನ್ನ ಬಳಿ ಇದ್ದ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಶಬರೀಶನ ಎದೆಯ ಬಲ ಭಾಗ, ತಲೆ, ಕುತ್ತಿಗೆ ಸೇರಿದಂತೆ ವಿವಿಧೆಡೆ ಗಾಯವಾಗಿದೆ. ಸ್ಥಳೀಯರು ಜಗಳ ಬಿಡಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಬರೀಶನನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಗೋಂಧಿ ಚಟ್ನಳ್ಳಿಯಲ್ಲಿ ಪೊಲೀಸರ ದಾಳಿ, ಹೊಲ, ಗದ್ದೆಗೆ ಹಾರಿ ಓಡಿದ ಆರೋಪಿ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200