ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JUNE 2024
HOSANAGARA : ಅಬ್ಬಿ ಜಲಪಾತದ (Falls) ನೀರಿನಲ್ಲಿ ಕೊಚ್ಚಿಹೋಗಿದ್ದ ಬಳ್ಳಾರಿಯ ವಿನೋದ್ ಅವರ ಶವ ಪತ್ತೆಯಾಗಿದೆ. ಹೊಸನಗರ ತಾಲ್ಲೂಕಿನ ಯಡೂರು ಬಳಿ ಅಬ್ಬಿ ಜಲಪಾತದಲ್ಲಿ ಭಾನುವಾರ ಈ ದುರ್ಘಟನೆ ಸಂಭವಿಸಿತ್ತು. ಮಧ್ಯಾಹ್ನದಿಂದಲೇ ಪಿಎಸ್ಐ ರಮೇಶ್ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ತೀವ್ರ ಶೋಧ ನಡೆಸಿದ್ದರು. ಆದರೂ ವಿನೋದ್ ಮೃತದೇಹ ಪತ್ತೆಯಾಗಿರಲಿಲ್ಲ.
ಸೋಮವಾರ ಬೆಳಿಗ್ಗೆ ಮುಳುಗು ತಜ್ಞರಾದ ಈಶ್ವರ ಮಲ್ಪೆ ಮತ್ತು ತಂಡ, ಕೋಟ ಜೀವನ್ ಮಿತ್ರ, ನಾಗರಾಜ ಪುತ್ರನ್ ಅವರನ್ನು ಕರೆಯಿಸಿ ಶೋಧ ಕಾರ್ಯ ನಡೆಸಿದಾಗ ನೀರಿನೊಳಗೆ ಕಲ್ಲಿನ ನಡುವೆ ಸಿಲುಕಿದ್ದ ವಿನೋದ್ ಮೃತದೇಹವನ್ನು ಹೊರಕ್ಕೆ ತೆಗೆಯಲಾಯಿತು.

ನಗರ ಸಂಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ವಿನೋದ್ ಹುಟ್ಟೂರು ಬಳ್ಳಾರಿ ಜಿಲ್ಲೆಯ ಮಿಂಚೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಯಿತು. ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿನೋದ್ ಸೇರಿ 12 ಮಂದಿ ಅಬ್ಬಿ ಜಲಪಾತ ವೀಕ್ಷಿಸಲು ಬಂದಿದ್ದರು.
ಇದನ್ನೂ ಓದಿ – ಮೆಗ್ಗಾನ್ ಆಸ್ಪತ್ರೆಯ ತುರ್ತು ನಿಗಾ ಘಟಕದಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಶಾಕ್
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





