ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟೆಂಬರ್ 2021
ಕಾಲು ಜಾರಿ ಈಜುಕೊಳಕ್ಕೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಗುತ್ತಿಗೆದಾರನ ವಿರುದ್ಧ ದೂರು ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆಲ್ಕೊಳದ ಪ್ರಿಯದರ್ಶಿನಿ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ. ಸ್ನೇಹಿತರೊಂದಿಗೆ ಆಟವಾಡಲು ತೆರಳಿದ್ದ ಯುವಕ ಕಾಲು ಜಾರಿ ಈಜುಕೊಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ.
ಹೇಗಾಯ್ತು ಘಟನೆ?
ಸಂದೇಶ್ (16) ಮೃತ ದುರ್ದೈವಿ. ನಂದಿನಿ ಬಡಾವಣೆಯ ನಿವಾಸಿ ಸಂದೇಶ್, ಸ್ನೇಹಿತರ ಜೊತೆ ಆಟವಾಡಲು ತೆರಳಿದ್ದ. ಪ್ರಿಯದರ್ಶಿನಿ ಬಡಾವಣೆಯ ಸಂಜೀವಿನಿ ಬಡಾವಣೆಯಲ್ಲಿ ಆಟವಾಡುತ್ತಿದ್ದಾಗ ಈಜುಕೊಳಕ್ಕೆ ಬಿದ್ದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೂಡಾಗಾಗಿ ಈಜುಕೊಳ ನಿರ್ಮಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಗುತ್ತಿಗೆದಾರರು ಬೇಲಿಯನ್ನು ಹಾಕದೆ ಈಜುಕೊಳ ಮಾಡಿದ್ದಾರೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಸಂದೇಶ್ ಕಾಲು ಜಾರಿ ಈಜುಕೊಳಕ್ಕೆ ಬಿದ್ದಿರುವ ಬಗ್ಗೆ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಂದೇಶನ ತಂದೆ ಡಿ.ಕೆ.ಶಿವಕುಮಾರ್ ಆಟೋ ಚಾಲಕರಾಗಿದ್ದಾರೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200