ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SORABA NEWS | 16 ಡಿಸೆಂಬರ್ 2021
ಕೆರೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಯುವಕನ ಮೃತದೇಹ ಪತ್ತೆ ಮಾಡಿದ್ದಾರೆ.
ಸೊರಬ ತಾಲೂಕು ಹಿರೇಶಕುನ ಕೆರೆಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಸೊರಬಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಶಂಕರ ವೆಂಕಟೇಶಪ್ಪ (30) ಮೃತ ದುರ್ದೈವಿ.
ಸ್ನಾನ ಮಾಡಲು ಕೆರೆಗೆ ಇಳಿದಿದ್ದ ಶಂಕರ ವೆಂಕಟೇಶಪ್ಪ ನೀರಿನಲ್ಲಿ ಮುಳುಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಮೃತದೇಹ ಪತ್ತೆಯಾಗಿದೆ.
ಡಿ.ವಿ.ಮಂಜುನಾಥ್, ವಿ.ನಾಗರಾಜ್, ಮಹೇಶ್ ಮಡಿವಾಳ, ಪ್ರಶಾಂತ್, ಡಿ.ಕೆ.ನಾಗರಾಜ್ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





