ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 23 JUNE 2024
HOSANAGARA : ಅಬ್ಬಿ ಫಾಲ್ಸ್‌ನಲ್ಲಿ (Abbi Falls) ಕಾಲು ಜಾರಿ ಬಿದ್ದು ಯುವಕ ನೀರುಪಾಲಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಹೊಸನಗರ ತಾಲೂಕು ಯಡೂರು ಸಮೀಪದ ಅಬ್ಬಿ ಫಾಲ್ಸ್‌ನಲ್ಲಿ ಬಳ್ಳಾರಿ ಮೂಲದ ವಿನೋದ್ (26) ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಿನೋದ್ ತನ್ನ ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್‌ಗೆ ಪ್ರವಾಸಕ್ಕೆ ಬಂದಿದ್ದರು. ಕೊಡಚಾದ್ರಿ ಪ್ರವಾಸ ಮುಗಿಸಿದ್ದ ತಂಡ ಅಬ್ಬಿ ಫಾಲ್ಸ್‌ಗೆ ಆಗಮಿಸಿದ್ದಾಗ ಆವಘಡ ಸಂಭಿವಿಸಿದೆ.

ನಿರ್ಬಂಧವಿದ್ದರು ಫಾಲ್ಸ್‌ಗೆ ಹೋಗಿದ್ದರು
ಕಳೆದ ವರ್ಷ ಅಬ್ಬಿ ಫಾಲ್ಸ್‌ನಲ್ಲಿ ಮುಳುಗಿ ವ್ಯಕ್ತಿ ಮೃತಪಟ್ಟಿದ್ದರು. ಮಳೆ ಜಾಸ್ತಿಯಾದ ಹಿನ್ನೆಲೆ ಅಬ್ಬಿ ಫಾಲ್ಸ್‌ಗೆ ಪ್ರವಾಸಿಗರು ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೂ ಬೆಂಗಳೂರಿನಿಂದ ಬಂದ ಪ್ರವಾಸಿಗರು ಟಿಟಿ ವಾಹನ ನಿಲ್ಲಿಸಿ ಸುಮಾರು ಒಂದೂವರೆ ಕಿ.ಮೀ ನಡೆದು ಹೋಗಿದ್ದರು. ಘಟನೆ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ವಿನೋದ್‌ಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ – ತೀವ್ರ ಕುತೂಹಲ ಮೂಡಿಸಿದೆ ಡಿಸಿಸಿ ಬ್ಯಾಂಕ್ ಚುನಾವಣೆ, ಕಣದಲ್ಲಿದ್ದಾರೆ 28 ಅಭ್ಯರ್ಥಿಗಳು, ಇಲ್ಲಿದೆ ಲಿಸ್ಟ್






