ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಯುವಕನೊಬ್ಬ ಹಳೆ ಸೇತುವೆಯಿಂದ ತುಂಗಾ ನದಿಗೆ ಹಾರಿದ್ದಾನೆ. ಆತ ಹೊಳೆಯಲ್ಲಿ ತೇಲಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಳಗ್ಗೆ ಹಳೆ ಸೇತುವೆ ಮೇಲಿಂದ ಯುವಕನೊಬ್ಬ ಹೊಳಗೆ ಜಿಗಿದಿದ್ದಾನೆ. ಇದನ್ನು ಗಮನಿಸಿದ ವಾಹನ ಸವಾರರು ಕೂಡಲೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಸ್ಥಳೀಯರಿಂದ ಯುವಕನ ರಕ್ಷಣೆ
ಇನ್ನು, ಯುವಕ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹೊಳೆಗೆ ಇಳಿದು ಯುವಕರನ್ನು ರಕ್ಷಣೆ ಮಾಡಿದ್ದಾರೆ. ರೈಲ್ವೆ ಸೇತುವೆ ಸಮೀಪ ಯುವಕನನ್ನು ನೀರಿನಲ್ಲಿ ರಕ್ಷಣೆ ಮಾಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವ ಮೊದಲು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಗಾಯವಾಗಿದ್ದು, ಕೋಟೆ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.