ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |4 JANUARY 2023
HOSANGARA : ಅಬ್ಬಿ ಫಾಲ್ಸ್ ನಲ್ಲಿ (falls) ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರು, ಪೊಲೀಸರು ಶೋಧ ಕಾರ್ಯ ನಡೆಸಿ ಮೃತದೇಹ ಪತ್ತೆ ಹಚ್ಚಿದ್ದಾರೆ.
ತೀರ್ಥಹಳ್ಳಿಯ ಡಿಪ್ಲೋಮಾ ವಿದ್ಯಾರ್ಥಿ ರಿಷಬ್ ಮೃತ ಯುವಕ ಎಂದು ಹೇಳಲಾಗುತ್ತಿದೆ. ಮೂವರು ಸ್ನೇಹಿತರು ಇವತ್ತು ಮಧ್ಯಾಹ್ನ ಅಬ್ಬಿ ಫಾಲ್ಸ್ ಗೆ (falls) ಬಂದಿದ್ದರು. ಕೆಳಗಿಳಿದು ಈಜಲು ಹೋಗಿದ್ದರು. ನೀರಿಗಿಳಿದಿದ್ದ ರಿಷಬ್ ನಾಪತ್ತೆಯಾಗಿದ್ದ.
ಇದನ್ನೂ ಓದಿ – ಸಂಸದ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ನಿಧನ, ಕೆರೆಯಲ್ಲಿ ಮೃತದೇಹ ಪತ್ತೆ
ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಕ್ಕೆ ಶೋಧ ಕಾರ್ಯ ನಡೆಸಿದರು. ರಿಷಬ್ ಮೃತದೇಹ ಪತ್ತೆಯಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



