ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021
ಶಿವಮೊಗ್ಗದಲ್ಲಿ ಇಬ್ಬರು ಯುವಕರ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಇರಿಯಲಾಗಿದೆ. ಓರ್ವ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೆ.ಆರ್.ಪುರಂ ನಿವಾಸಿ ಜೀವನ್ ಮೃತ ದುರ್ದೈವಿ. ಸೀಗೆಹಟ್ಟಿಯ ಕೇಶವ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಘಟನೆ?
ಎನ್.ಟಿ.ರಸ್ತೆಯ ಸುಂದರ ಆಶ್ರಯ ಲಾಡ್ಜ್ ಸಮೀಪ ತಡರಾತ್ರಿ ಘಟನೆ ಸಂಭವಿಸಿದೆ. ಕ್ಷುಲಕ ವಿಚಾರಕ್ಕೆ ಚಾಕು ಇರಿದಿರುವ ಶಂಕೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆಗಾಗಲೆ ಜೀವನ್ ಮೃತಪಟ್ಟಿದ್ದು, ಕೇಶವ್‍ಗೆ ಚಿಕಿತ್ಸೆ ನೀಡಲಾಗುತ್ತಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]