ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021
ಆಯುಧ ಪೂಜೆಯಂದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಘಟನೆ ಸಂಭವಿಸಿದೆ.
ಮೃತನನ್ನು ಸಂತೋಷ್ (30) ಎಂದು ಗುರುತಿಸಲಾಗಿದೆ. ಈತನು ಶಿವಮೊಗ್ಗದ ಗಾಡಿಕೊಪ್ಪ ಬಳಿಯ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ.
ಶಿವಮೊಗ್ಗದ ಬಾಪೂಜಿನಗರದ ಗಂಗಾಮತ ಹಾಸ್ಟೆಲ್ ಸಮೀಪ ಸಂತೋಷ್’ನನ್ನು ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಂತೋಷ್ ತಲೆ ಭಾಗಕ್ಕೆ ತೀವ್ರವಾಗಿ ಹಲ್ಲೆ ಮಾಡಿ, ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200






