ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಲಾಗಿದೆ. ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಹರ್ಷ (22) ಮೃತ ದುರ್ದೈವಿ. ಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಇವತ್ತು ರಾತ್ರಿ ಘಟನೆ ಸಂಭವಿಸಿದೆ.
ಹೇಗಾಯ್ತು ಘಟನೆ?
ಯುವಕರ ಗುಂಪೊಂದು ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹರ್ಷ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಬಿಗುವಿನ ವಾತಾವರಣ
ಹರ್ಷಾ, ಭಜರಂಗದಳ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ. ಆತನ ಹತ್ಯೆ ವಿಚಾರ ತಿಳಿಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸಿಟಿಯಲ್ಲಿ ಬಂದೋಬಸ್ತ್ ಹೆಚ್ಚಳ
ಹತ್ಯೆ ವಿಚಾರ ತಿಳಿಯುತ್ತಿದ್ದ ಹಾಗೆ ಶಿವಮೊಗ್ಗ ನಗರದಲ್ಲಿ ಚಿತ್ರಣ ದಿಢೀರ್ ಬದಲಾಗಿದೆ. ತಕ್ಷಣ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಗರದಾದ್ಯಂತ ಅಂಗಡಿ, ಹೊಟೇಲ್’ಗಳನ್ನು ಬಂದ್ ಮಾಡಿಸಿದ್ದಾರೆ. ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.