ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

SHIVAMOGGA LIVE NEWS, 28 NOVEMBER 2024 ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಸಾಗರ : ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನಲ್ಲಿ (Transformer) ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪದ ಹಾನಂಬಿ ಹೊಳೆಯ ಮೇಲ್ಭಾಗದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತನನ್ನು ಸಾಗರದ ಜನ್ನತ್‌ ನಗರದ ನಿವಾಸಿ ಪ್ರಕಾಶ್‌ ಶೆಟ್ಟಿ (36) ಎಂದು ಗುರುತಿಸಲಾಗಿದೆ. ಯುವಕ ಬಾರ್‌ ಬೆಂಡಿಂಗ್‌ ಕೆಲಸ ಮಾಡುತ್ತಿದ್ದ. ಬುಧವಾರ ಈತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

crime name image

ಇದನ್ನೂ ಓದಿ » ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ

Transformer

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment