ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ವಿವಾಹವಾಗಿದ್ದ 19 ವರ್ಷದ ಯುವಕನಿಗೆ (Youth) 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಏನಿದು ಪ್ರಕರಣ?
19 ವರ್ಷದ ಯುವಕನೊಬ್ಬ 2022ರಲ್ಲಿ ಭದ್ರಾವತಿ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಮದುವೆಯಾಗಿದ್ದ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದಳು. ತನಿಖೆ ನಡೆಸಿದ ಆಗಿನ ಇನ್ಸ್‌ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಎಫ್‌ಟಿಎಸ್‌ಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಯುವಕನಿಗೆ ಪೋಕ್ಸೋ ಕಾಯ್ದೆ ಸೆಕ್ಷನ್ 6ರ ಪ್ರಕಾರ 20 ವರ್ಷ ಜೈಲು ಶಿಕ್ಷೆ, ₹50,000 ದಂಡ ವಿಧಿಸಿದ್ದಾರೆ. ಆರೋಪಿಯಿಂದ ₹80,000 ದಂಡದ ಮೊತ್ತವನ್ನು ನೊಂದ ಬಾಲಕಿಗೆ ನೀಡಬೇಕು. ಇನ್ನು, ಕಾನೂನು ಸೇವಾ ಪ್ರಾಧಿಕಾರ ಬಾಲಕಿಗೆ ₹4 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಶ್ರೀಧರ್.ಹೆಚ್.ಆರ್ ವಾದ ಮಂಡಿಸಿದ್ದರು.


ಇದನ್ನೂ ಓದಿ » ಶಿವಮೊಗ್ಗ ದಸರಾ, ಇವತ್ತು ಏನೇನೆಲ್ಲ ಕಾರ್ಯಕ್ರಮಗಳಿವೆ? ಎಲ್ಲೆಲ್ಲಿ ನಡೆಯುತ್ತೆ?
Youth sentenced for 20 years jail
LATEST NEWS
- ನದಿಗಳಿಗೆ ಕಸಾಯಿಖಾನೆಯ ತ್ಯಾಜ್ಯ, ಅರುಣ್ ಕಳವಳ

- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





