ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು ₹65,000 ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪಲಕ್ ಶಾದಿ ಮಹಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧಾರದ ಮೇಲೆ ದೊಡ್ಡಪೇಟೆ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

Doddapete-Police-nab-two-persons-in-NDPS-Act.

ದಾಳಿ ವೇಳೆ ಸಿಕ್ಕಿಬಿದ್ದ ಆರೋಪಿ ಅಕ್ಮಲ್ ಖಾನ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ₹65,000 ಮೌಲ್ಯದ, ಒಟ್ಟು 1 ಕೆಜಿ 261 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!