ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯ ರಸ್ತೆ ಬದಿಯ (roadside) ಮರವೊಂದರಲ್ಲಿ ಇಂದು ಮಧ್ಯಾಹ್ನ ಯುವಕನೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತನನ್ನು ​ಹರಮಘಟ್ಟದ ದೇವರಾಜ್ (34) ಎಂದು ಗುರುತಿಸಲಾಗಿದೆ. ರಸ್ತೆ ಪಕ್ಕದ ಮರದಲ್ಲಿ ಯುವಕನ ಮೃತದೇಹ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ​ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

120426-Shimoga-Park-Extension-incident-Jayanagara-Police-visit-the-spot.avif

120426 Shimoga Park Extension incident Jayanagara Police visit the spot

ಇದನ್ನೂ ಓದಿ : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment