ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 28 ಆಗಸ್ಟ್ 2020
ಜೋಗ ಜಲಪಾತದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಯುವಕನನ್ನು ಆತನ ಪೋಷಕರಿಗೆ ಒಪ್ಪಿಸಲಾಗಿದೆ. ಆತನನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ಬುಧವಾರ ಜೋಗದ ರಾಣಿ ಫಾಲ್ಸ್ ಮೇಲಿಂದ ಜಿಗಿಯಲು ಬೆಂಗಳೂರಿನ ಚೇತನ್ ಯತ್ನಿಸಿದ್ದ. ಪೊಲೀಸರು ಆತನ ಮನವೊಲಿಸಿದ್ದರು. ಚೇತನ್ ಬಳಿ ಮಾಹಿತಿ ಪಡೆದು ಬೆಂಗಳೂರಿನಲ್ಲಿರುವ ಪೋಷಕರಿಗೆ ತಿಳಿಸಲಾಗಿತ್ತು.
ಆಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ
ಚೇತನ್ ತಾಯಿ ಮತ್ತು ಸಹೋದರ ಜೋಗ ಪೊಲೀಸ್ ಠಾಣೆಗೆ ಬಂದು ಕರೆದೊಯ್ದಿದ್ದಾರೆ. ಈ ವೇಳೆ ಠಾಣೆಯಲ್ಲಿ ಚೇತನ್ ರಂಪಾಟ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಆತನಿಗೆ ತುರ್ತು ಚಿಕಿತ್ಸೆ ನೀಡಿ, ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕಳುಹಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422