SHIVAMOGGA LIVE NEWS | 18 NOVEMBER 2023
SHIMOGA : ಪ್ರತ್ಯೇಕ ಪ್ರಕರಣದಲ್ಲಿ ನಗರದಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ 1 : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಮಹಾದೇವ್ (21) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ಪ್ರಕರಣ 2 : ಕೆ.ಆರ್.ಪುರಂ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು (Youths) ಗಸ್ತು ತಿರುಗುತ್ತಿದ್ದ ಪೊಲೀಸರು ವಿಚಾರಣೆ ನಡೆಸಿದರು. ಗಾಂಜಾ ಸೇವನೆ ಅನುಮಾನದ ಮೇರೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಮೊಹಮ್ಮದ್ ಹ್ಯಾರಿಸ್ (23) ಎಂಬಾತನ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ.