ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 FEBRUARY 2024
SHIKARIPURA : ಅಡ್ಡಾದಿಡ್ಡಿ ಬೈಕ್ ಚಲಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಖಾಸಗಿ ಕಾಲೇಜು ಕಂಪ್ಯೂಟರ್ ಆಪರೇಟರ್‌ಗೆ ಚಾಕು ಇರಿಯಲಾಗಿದೆ. ಶಿಕಾರಿಪುರದ ದೊಡ್ಡಪೇಟೆ ಮುಖ್ಯರಸ್ತೆಯ ವಿಠ್ಠಲ ದೇಗುಲದ ಬಳಿ ಮಂಗಳವಾರ ಘಟನೆ ಸಂಭವಿಸಿದೆ.
ಸುಶೀಲ್ (23) ಎಂಬುವವರಿಗೆ ಚಾಕು ಇರಿಯಲಾಗಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಭವಿಸಿದ್ದು ಹೇಗೆ?
ಇನ್ನು, ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ದ್ವಿಚಕ್ರ ವಾಹನವನ್ನು ಅಡ್ಡಾದಿಡ್ಡ ಚಲಾಯಿಸುತ್ತಿದ್ದ ಯುವಕನಿಗೆ ಸರಿಯಾಗಿ ಗಾಡಿ ಓಡಿಸುವಂತೆ ಸುಶೀಲ್ ತಿಳಿಸಿದ್ದಾರೆ. ಕುಪಿತಗೊಂಡ ಯುವಕ ನಾಲ್ವರು ಸ್ನೇಹಿತರನ್ನು ಕರೆಯಿಸಿಕೊಂಡಿದ್ದ. ಈ ವೇಳೆ ಸುಶೀಲ್ ಅವರಿಗೆ ಚಾಕು ಇರಿಯಲಾಗಿದೆ. ಘಟನೆ ಸಂಬಂಧ ತನಿಕೆಗೆ ಮೂರು ತಂಡ ರಚಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.ʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಫಳಫಳ ಹೊಳೆಯಿತು ಹಿತ್ತಾಳೆ ಲೋಟ, ನಂಬಿ ಚಿನ್ನದ ತಾಳಿ ಕೊಟ್ಟ ಮಹಿಳೆಗೆ ಕಾದಿತ್ತು ದೊಡ್ಡ ಆಘಾತ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





