SHIVAMOGGA LIVE NEWS | 21 SEPTEMBER 2023
HOLEHONNURU : ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ತರುವಾಗ ಮಾಡಿದ್ದ ನೃತ್ಯ (Viral Video) ಯುವಕರಿಗೆ ಸಂಕಷ್ಟ ತಂದೊಡ್ಡಿದೆ. ಪೊಲೀಸರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಡಾನ್ಸ್ ಮಾಡುವಾಗ ಮಚ್ಚು ಹಿಡಿದು ಕುಣಿದಿದ್ದೆ ಘಟನೆಗೆ ಕಾರಣ.
ರೀಲ್ಸ್ ತಂದ ಸಂಕಷ್ಟ
ಅರಕೆರೆ ಗ್ರಾಮದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ತರುವಾಗ ಯುವಕರು ನೃತ್ಯ ಮಾಡಿದ್ದರು. ಈ ವೇಳೆ ಯುವಕನೊಬ್ಬ ಮಚ್ಚು ಹಿಡಿದು ಕುಣಿದು ಕುಪ್ಪಳಿಸಿದ್ದ. ಇದರ ವಿಡಿಯೋವನ್ನು (Viral Video) ರೀಲ್ಸ್ ರೀತಿ ಬ್ಯಾಕ್ ಗ್ರೌಂಡ್ ಸಾಂಗ್ ಮಿಕ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ವಿಡಿಯೋ ಗಮನಿಸಿದ ಪೊಲೀಸರು ಯುವಕರನ್ನು ಹೊಳೆಹೊನ್ನೂರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದರು.
ಇದನ್ನೂ ಓದಿ – ಚೈತ್ರಾ ಕುಂದಾಪುರ ಕೇಸ್, ಶಿವಮೊಗ್ಗಕ್ಕೆ ಆರೋಪಿ ಕರೆತಂದ ಸಿಸಿಬಿ ಪೊಲೀಸ್, ಕಾರಣವೇನು?
ಎಚ್ಚರಿಕೆ ನೀಡಿ ಬಿಡುಗಡೆ
ಯುವಕರನ್ನು ಪೊಲೀಸರು ಕರೆತಂದ ವಿಚಾರ ತಿಳಿದು ಅವರ ಪೋಷಕರು, ಗ್ರಾಮಸ್ಥರು ಠಾಣೆ ಬಳಿ ಬಂದಿದ್ದರು. ಯುವಕರಿಗೆ ಯಾವುದೇ ಅಪರಾಧದ ಹಿನ್ನೆಲೆ ಇಲ್ಲ. ಅಚಾನಕ್ಕಾಗಿ ಮಚ್ಚು ಹಿಡಿದು ನೃತ್ಯ ಮಾಡಿದ್ದಾರೆ ಎಂಬುದು ಖಚಿತವಾಗಿದೆ. ಅಲ್ಲದೆ ತಮ್ಮ ತಪ್ಪಿನ ಕುರಿತು ಪಶ್ಚಾತ್ತಾಪ ವ್ಯಕ್ತಪಡಿಸಿದ ಹಿನ್ನೆಲೆ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ
ಪೋಸ್ಟ್ ಮಾಡುವಾಗ ಎಚ್ಚರ
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ, ಫೋಟೊಗಳನ್ನು ಅಪ್‌ಲೋಡ್ ಮಾಡುವಾಗ ಎಚ್ಚರಿಕೆ ಅಗತ್ಯ. ಸಾಮಾಜಿಕ ಸ್ವಾಸ್ಥ್ಯ ಕದಡುವ ದೃಶ್ಯ, ಫೋಟೊಗಳನ್ನು ಅಪ್‌ಲೋಡ್ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮಚ್ಚು, ಲಾಂಗ್ ಮತ್ತು ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸಿ ಸಾಮಾಜಿಕ ಜಾಲಾತಾಣದಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ ಹಲವರ ವಿರುದ್ಧ ಈ ಹಿಂದೆ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಅತಿ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ, ಎಲ್ಲೆಲ್ಲಿ ಹೇಗಿದೆ ಕಾರ್ಯಕ್ರಮ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200