ಶಿವಮೊಗ್ಗದ ಐಎಎಸ್‌ ಅಧಿಕಾರಿ ಹೆಸರಿನಲ್ಲಿ ವಂಚಿಸಲು ಯತ್ನ, ದಾಖಲಾಯ್ತು ಪ್ರಕರಣ

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹೇಮಂತ್‌.ಎನ್‌ ಅವರ ಹೆಸರು ಮತ್ತು ಭಾವಚಿತ್ರವನ್ನು ಬಳಸಿಕೊಂಡು ಸೈಬರ್ ವಂಚಕರು ನಕಲಿ ವಾಟ್ಸಾಪ್ (WhatsApp) ಖಾತೆ ಸೃಷ್ಟಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಐಎಎಸ್‌ ಅಧಿಕಾರಿ ಹೇಮಂತ್.ಎನ್ ಅವರು ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : ಪಾರ್ಟಿ ವೇಳೆ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು

IAS-Officer-N-Hemanth-Files-complaint-at-Shimoga-cyber-crime.

ವಂಚಕರು ವಿದೇಶಿ ಕೋಡ್ ಹೊಂದಿರುವ ಮೊಬೈಲ್ ಸಂಖ್ಯೆ ಬಳಸಿಕೊಂಡು ನಕಲಿ ವಾಟ್ಸಾಪ್ ಖಾತೆ ತೆರೆದಿದ್ದಾರೆ. ಅದಕ್ಕೆ ಸಿಇಒ ಅವರ ಭಾವಚಿತ್ರವನ್ನು ಡಿಪಿಯಾಗಿ ಬಳಸಿಕೊಂಡಿದ್ದಾರೆ. ಈ ನಕಲಿ ಖಾತೆಯ ಮೂಲಕ ವಿವಿಧ ಅಧಿಕಾರಿಗಳಿಗೆ ಮೆಸೇಜ್‌ಗಳನ್ನು ಕಳುಹಿಸಿ ವಂಚಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

IAS-Officer-N-Hemanth-Files-complaint-at-Shimoga-cyber-crime.

‘ತಮ್ಮ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ’ ಹೇಮಂತ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಕೊಂಡು ಸಿ.ಇ.ಎನ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  

Leave a Comment