ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
DAM LEVEL, 7 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಲಿಂಗನಮಕ್ಕಿ ಜಲಾಶಯದ ಒಳ ಹರಿವು ತಗ್ಗಿದೆ. ಇವತ್ತು 22,345 ಕ್ಯೂಸೆಕ್ ಒಳ ಹರಿವು ಇದೆ. 12,482 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.30 ಅಡಿ ಇದೆ. ಒಟ್ಟು 151.64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 142.65 ಟಿಎಂಸಿ ನೀರು ಸಂಗ್ರಹವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 19,951 ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ ನೀರಿನ ಮಟ್ಟ ಇಳಿಕೆಯಾಗಿದೆ.
ಭದ್ರಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ತಗ್ಗಿದೆ. ಇವತ್ತು ಜಲಾಶಯಕ್ಕೆ 7,801 ಕ್ಯೂಸೆಕ್ ಒಳ ಹರಿವು ಇದೆ. 7223 ಕ್ಯೂಸೆಕ್ ನೀರನ್ನು ಮಾತ್ರ ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180.1 ಅಡಿಗೆ ಏರಿಕೆಯಾಗಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 64.27 ಟಿಎಂಸಿ ನೀರು ಸಂಗ್ರಹವಾಗಿದೆ.