SHIVAMOGGA LIVE NEWS | SHIMOGA | 12 ಜುಲೈ 2022
ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳಿಗೆ ( DAM ) ನೀರಿನ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದಿಂದ ಮಾತ್ರ ನೀರನ್ನು ಹೊರಗೆ ಹರಿಸಲಾಗುತ್ತಿದೆ.
ಯಾವ್ಯಾವ ಜಲಾಶಯಕ್ಕೆ ಎಷ್ಟಿದೆ ಒಳ ಹರಿವು?
ತುಂಗಾ ಜಲಾಶಯ : 51,053 ಕ್ಯೂಸೆಕ್ ಒಳ ಹರಿವು ಇದೆ. 49,104 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ.
ಭದ್ರಾ ಜಲಾಶಯ : ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಿಂದಾಗಿ 40,920 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ನೀರಿನ ಮಟ್ಟ 177.7 ಅಡಿಗೆ ಏರಿಕೆಯಾಗಿದೆ.
ಲಿಂಗನಮಕ್ಕಿ ಜಲಾಶಯ : ಜೋರು ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ 53,412 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 1782.50 ಅಡಿಗೆ ತಲುಪಿದೆ.
ಇದನ್ನೂ ಓದಿ – ಭದ್ರಾ ಜಲಾಶಯದಿಂದ ನೀರು ಹರಿಸಲು ಸೂಚನೆ, ಯಾವ್ಯಾವ ನಾಲೆಗೆ ಎಷ್ಟು ನೀರು ಹರಿಸಲಾಗುತ್ತದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.