ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021
ದಸರಾ ಅಂಗವಾಗಿ ಶಿವಮೊಗ್ಗದಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿದೆ. ಚಲನಚಿತ್ರ ನಿರ್ದೇಶಕ, ನಟ ವಿ.ಮನೋಹರ್ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಅಕ್ಟೋಬರ್ 8ರಂದು ಬೆಲಗ್ಗೆ 9.30ಕ್ಕೆ ಹೆಚ್.ಪಿ.ಸಿ ಚಿತ್ರಮಂದಿರದಲ್ಲಿ ಚಲನಚಿತ್ರೋತ್ಸವಕ್ಕೆ ಚಾಲನೆ ಸಿಗಲಿದೆ. ಸಂಗೀತ ನಿರ್ದೇಶಕ, ಬಿಗ್ ಬಾಸ್ ಖ್ಯಾತಿ ವಾಸುಕಿ ವೈಭವ್, ನಟ ಸುಂದರ್, ನಟಿ ವೀಣಾ ಸುಂದರ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಸಾಲು ಸಾಲು ಸಿನಿಮಾ ಪ್ರದರ್ಶನ
ಚಿತ್ರೋತ್ಸವದ ಅಂಗವಾಗಿ ಏಳು ದಿನ ಚಲನಚಿತ್ರ ಪ್ರದರ್ಶನಗೊಳ್ಳಲಿದೆ. ಬೆಳಗ್ಗೆ 11 ಗಂಟೆಯಿಂದ ಸಿನಿಮಾ ಪ್ರದರ್ಶನವಾಗಲಿದೆ. ಉದ್ಘಾಟನೆ ದಿನ ರಾಮರಾಮರೇ ಸಿನಿಮಾ ಪ್ರದರ್ಶನಗೊಳ್ಳಲಿದೆ. ಅ. 9ರಂದು ಹೆಚ್ಪಿಸಿ ಚಿತ್ರಮಂದಿರದಲ್ಲಿ ಯುವರತ್ನ, ಅ.10ರಂದು ಹೆಚ್ಪಿಸಿ ಚಿತ್ರಮಂದಿರದಲ್ಲಿ ಪ್ರೀಮಿಯರ್ ಪದ್ಮಿನಿ, ಅ.11ರಂದು ಹೆಚ್ಪಿಸಿ ಚಿತ್ರಮಂದಿರದಲ್ಲಿ ಹೆಬೆಟ್ ರಾಮಕ್ಕ, ಅ.12ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅ.13ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ರಾಜಕುಮಾರ ಹಾಗೂ ಅ.14ರಂದು ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಕೃಷ್ಣ ಟಾಕೀಸ್ ಪ್ರದರ್ಶನಗೊಳ್ಳಲಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್.ಕಾಂ