ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 3 SEPTEMBER 2024 : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ (Festival) ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೂರು ಪ್ರಮುಖ ಆದೇಶ ಹೊರಡಿಸಿದ್ದಾರೆ. ಇಲ್ಲಿದೆ 3 ಫಟಾಫಟ್ ನ್ಯೂಸ್ ಅಪ್ಡೇಟ್
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಏನೆಲ್ಲ ಆದೇಶ ಹೊರಡಿಸಿದ್ದಾರೆ?
ಶಿವಮೊಗ್ಗ ಲೈವ್.ಕಾಂ : ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 6 ರಿಂದ ಸೆ. 20 ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.» ಬೈಕ್ ರ್ಯಾಲಿ ನಿಷೇಧ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ಲೈವ್.ಕಾಂ : ಗಣೇಶ ಮೂರ್ತಿಗಳನ್ನು ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭ ತೆಪ್ಪ ಬಳಕೆಗೆ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಮುಖ ಸೂಚನೆ ನೀಡಿ ಆದೇಶಿಸಿದ್ದಾರೆ. ತೆಪ್ಪದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ಹೋಗಲು ಅವಕಾಶ ನೀಡಬೇಕು. ಕಡ್ಡಾಯವಾಗಿ ಲೈಫ್ ಜಾಕೆಟ್ ಬಳಸಬೇಕು. ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಎಂದು ಆದೇಶಿಸಿದ್ದಾರೆ.» ತೆಪ್ಪ ಬಳಕೆಗೆ ಪ್ರಮುಖ ಸೂಚನೆ
ಶಿವಮೊಗ್ಗ ಲೈವ್.ಕಾಂ : ಜಿಲ್ಲೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 7 ರಿಂದ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಹಾಗೂ ಸೆ. 16 ರಿಂದ ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ.ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.» ಡಿಜೆ ನಿಷೇಧ
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?