ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020

ಎರಡು ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಇಬ್ಬರನ್ನು ಬಂಧಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನಾಪತ್ತೆ ಆಗಿರುವ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ತಾಲೂಕು ಉಂಬಳೆಬೈಲು ಗ್ರಾಮದಲ್ಲಿ ಘಟನೆ ನಡೆದಿದೆ. ಕಣಗಲಸರ ಗ್ರಾಮದ ದಿನೇಶ್ ಮತ್ತು ರಮೇಶ್ ಬಂಧಿತರು. ಇವರಿಂದ 2 ಜಿಂಕೆ ಚರ್ಮ, ಮಾಂಸ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಕಣಗಲಸರದ
ದಿವಾಕರ್, ನಾಗರಾಜ್, ಉಂಬಳೆಬೈಲಿನ ಶಿವಾನಂದ್, ದೀಪು ತಲೆಮರೆಸಿಕೊಂಡಿದ್ದಾರೆ. ಇವರ ಶೋಧ ಕಾರ್ಯ ನಡೆಯುತ್ತಿದೆ.
ಉಂಬಳೆಬೈಲು ವಲಯ ಅರಣ್ಯಾಧಿಕಾರಿ ಮಂಜುನಾಥ್, ಸಿಬ್ಬಂದಿ ಅಬ್ದುಲ್ ಕರೀಮ್, ಮುಬಾರಕ್, ಗಿಡ್ಡಸ್ವಾಮಿ,
ಸುನಿಲ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]