SHIVAMOGGA LIVE NEWS | MINISTER | 23 ಏಪ್ರಿಲ್ 2022
ಜನರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸುಳ್ಳು ಆರೋಪ ಮಾಡಿ ಅಧಿಕಾರದಿಂದ ಕೆಳಗೆ ಇಳಿಸಿರುವುದು ಖಂಡನೀಯ. ಈ ಪ್ರಕರಣದ ಬಗ್ಗೆ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಮತ್ತೆ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ವಾಸುದೇವನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಈಶ್ವರಪ್ಪ ಅವರು ಸಾವಿರಾರು ಕುಟುಂಬಗಳಿಗೆ ಸ್ವಂತ ಖರ್ಚಿನಲ್ಲಿ ಫುಡ್ ಕಿಟ್’ಗಳನ್ನು ಹಂಚಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರಿಗೆ ಉತ್ತಮ ಚಿಕಿತ್ಸೆ ಸಿಗುವಂತೆ ಮಾಡಿದ್ದರು. ಬಡವರಿಗೆ ಆಶ್ರಯ ಮನೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಈಗಾಗಲೇ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಶಿವಮೊಗ್ಗ ಕ್ಷೇತ್ರ ಸೇರಿದಂತೆ ಇಡೀ ರಾಜ್ಯದ ಗ್ರಾಮೀಣ ಭಾಗದ ಅಭಿವೃದ್ಧಿಗೆ, ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದರು ಎಂದರು.
ಈಶ್ವರಪ್ಪ ಅವರು ಸಚಿವ ಸ್ಥಾನದಿಂದ ಕೆಳಗಿಳಿದಿದ್ದು ಬೇಸರ ತಂದಿದೆ. ಅವರು ಆರೋಪ ಮುಕ್ತರಾದ ತಕ್ಷಣವೇ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳನ್ನು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ | ಶಾರದಾ ಪೂರ್ಯಾನಾಯ್ಕ್ ರಾಜ್ಯಕ್ಕೆ ಉತ್ತಮ ಸಚಿವೆ ಆಗಲಿದ್ದಾರೆ, ಮಾಜಿ ಸಿಎಂ ಭವಿಷ್ಯ