ಶಿವಮೊಗ್ಗ ಲೈವ್.ಕಾಂ |SORABA NEWS | 28 ಜುಲೈ 2021
ಪರೀಕ್ಷೆ ಭೀತಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಿತಿನ್ ದಾಸ್ (20) ಮೃತ ವಿದ್ಯಾರ್ಥಿ. ಬೆಂಗಳೂರಿನ ಕಾಲೇಜಿನಲ್ಲಿ ನಿತಿನ್ ದಾಸ್ ಬಿಇ ಪದವಿ ಅಧ್ಯಯನ ಮಾಡುತ್ತಿದ್ದ. ಲಾಕ್ ಡೌನ್ ಹಿನ್ನೆಲೆ ಸೊರಬ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿರುವ ಮನೆಗೆ ಬಂದಿದ್ದ.
ಆನ್ಲೈನ್ ಮೂಲಕ ನಿತಿನ್ ದಾಸ್ ತರಗತಿಗಳಲ್ಲಿ ಪಾಲ್ಗೊಳ್ಳುತ್ತಿದ್ದ. 2ನೇ ವರ್ಷದ ಬಿಇ ಪರೀಕ್ಷೆ ಬರೆಯಬೇಕಿತ್ತು. ಆದರೆ ಪರೀಕ್ಷೆ ಕುರಿತು ಆತಂಕದಿಂದ ನಿತಿನ್ ದಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200