ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 JANUARY 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲ ತಮಗಿಲ್ಲ. ಆದರೆ ಅವರನ್ನು ಸೋಲಿಸುವ ವಿಚಾರದಲ್ಲಿ ತಮಗೆ ಆಸಕ್ತಿ ಇದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಲ್ಲೇಶ್ವರ ನಗರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ (siddaramaiah) ಅವರು ಯಾವುದೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಅವರನ್ನು ಸೋಲಿಸುತ್ತೇವೆ ಎಂದರು.
ಇದನ್ನೂ ಓದಿ – ಪ್ರಸನ್ನ ಭಟ್ ಅಂತಿಮ ದರ್ಶನಕ್ಕೆ ಶಿವಮೊಗ್ಗ, ಹೊಸನಗರದಲ್ಲಿ ದೊಡ್ಡ ಸಂಖ್ಯೆಯ ಜನ, ಮುಖ್ಯ ರಸ್ತೆಯಲ್ಲಿ ಮೆರವಣಿಗೆ
ಶಾಸಕರೊಬ್ಬರು ಕ್ಷೇತ್ರ ಬದಲಿಸುವುದು ಮತದಾರರು ಮತ್ತು ಪಕ್ಷಕ್ಕೆ ಮಾಡಿದ ಅಪಮಾನವಾಗಿದೆ. ಸಿದ್ದರಾಮಯ್ಯ ಅವರು ಈಗ ಕ್ಷೇತ್ರ ಯಾವುದು ಎಂದು ಯೋಚಿಸುತ್ತಿದ್ದಾರೆ. ಮುಂದೆ ಯಾವ ಪಕ್ಷ ಎಂದು ಯೋಚಿಸುವ ಸ್ಥಿತಿಗೆ ತಲುಪಬಹುದು ಎಂದು ವ್ಯಂಗ್ಯವಾಡಿದರು.