ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವಿವಿಧ ಯೋಜನೆಗಳಿಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನೀಡಿರುವ ಜಾಗವನ್ನು ಸರ್ಕಾರ ಹಿಂಪಡೆಯಬೇಕು. ಈ ಭಾಗವನ್ನು ಜೈವಿಕ ವೈವಿಧ್ಯತೆಯ ತಾಣವಾಗಿಸಬೇಕು ಅಂತಾ ಮನವಿ ಮಾಡಿದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಾಗಿಗುಡ್ಡದ ವಿವಿಧ ಕಡೆ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.
ನಾಲ್ಕು ವರ್ಷದಿಂದ ರಾಗಿಗುಡ್ಡದಲ್ಲಿ ನೂರಾರು ಗಿಡಗಳನ್ನು ನೆಟ್ಟು, ಹಸಿರೀಕರಣ ಮಾಡಲಾಗುತ್ತಿದೆ. ಈ ಮಧ್ಯೆ ವಿವಿಧ ಯೋಜನೆಗಳಿಗೆ ಜಾಗ ನೀಡಲಾಗಿದೆ. ಯೋಜನೆಗಳಿಗೆ ಪರ್ಯಾಯ ಜಾಗ ಸೂಚಿಸಬೇಕು ಎಂದು ಪರಿಸರ ಆಸಕ್ತರು ಮನವಿ ಮಾಡಿದರು.
https://www.facebook.com/liveshivamogga/videos/241760936781312/?t=4
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ನವ್ಯಶ್ರೀ ನಾಗೇಶ್, ಶಿವಮೊಗ್ಗ ನಂದನ್, ಪ್ರೊ.ಬಿ.ಎಂ.ಕುಮಾರಸ್ವಾಮಿ, ಬಾಲಕೃಷ್ಣ, ಶೇಖರ್ ಗೌಳೇರ್, ಅಶೋಕ್ ಕುಮಾರ್ ಸೇರಿದಂತೆ ಹಲವು ಪರಿಸರ ಆಸಕ್ತರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]