ಶಿವಮೊಗ್ಗ ಲೈವ್.ಕಾಂ | ಸಾಗರ | 20 ಸೆಪ್ಟೆಂಬರ್ 2019

ಟೋಲ್’ಗೇಟ್ ಶುಲ್ಕ ಸಂಗ್ರಹಿಸಲು ನಕಲಿ ರಶೀದಿ ಪುಸ್ತಕ ಬಳಸಿ ಹಣ ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನೆಲೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತುಮರಿ ಗ್ರಾಮ ಪಂಚಾಯಿತಿ ಪಿಡಿಒ ಇಮ್ತಿಯಾಜ್ ಪಾಷಾ, ಟೋಲ್’ಗೇಟ್ ಸಿಬ್ಬಂದಿಗಳಾದ ಮಧುಕುಮಾರ್ ಮತ್ತು ಪವನ್ ಮೇಲೆ ಎಫ್ಐಆರ್ ದಾಖಲಾಗಿದೆ.
ಏನಿದು ಪ್ರಕರಣ? ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಸಿಗಂದೂರು ಲಾಂಚ್’ಗೆ ತೆರಳುವ ಕಳಸವಳ್ಳಿ ಟೋಲ್’ಗೇಟ್’ನಲ್ಲಿ ನಕಲಿ ರಶೀದಿ ಪುಸ್ತಕ ಬಳಕೆ ಮಾಡಿಕೊಳ್ಳುತ್ತಿರುವ ಆರೋಪವಿತ್ತು. ಈ ಸಂಬಂಧ ಸಾಗರ ತಾಲೂಕು ಪಂಚಾಯಿತಿ ಇಒ ಮಂಜುನಾಥಸ್ವಾಮಿ ಅವರು ನೀಡಿದ ದೂರಿನ ಹಿನ್ನೆಲೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಸೆ.17ರಂದು ಪ್ರಕರಣ ದಾಖಲಾಗಿತ್ತು. ವಿಚಾರಣೆ ಬಳಿಕ ಪೊಲೀಸರು ಮೂವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.
ನಕಲಿ ರಶೀದಿ ಪುಸ್ತಕ ಬಳಸಿಕೊಂಡು ಶಿವಮೊಗ್ಗ ಜಿಲ್ಲೆಯಲ್ಲಿ ನೋಂದಣಿಯಾಗದ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]