ಶಿವಮೊಗ್ಗ ಲೈವ್.ಕಾಂ | SHIKARIPURA NEWS | 8 ಜುಲೈ 2021
ಸಾಲ ಬಾಧೆಯಿಂದ ಮನನೊಂದು ರೈತರೊಬ್ಬರು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗೀಹಳ್ಳಿಯಲ್ಲಿ ಘಟನೆ ಸಂಭವಿಸಿದೆ.
ಚಂದ್ರಪ್ಪ, ಆತ್ಮಹತ್ಯೆ ಮಾಡಿಕೊಂಡ ರೈತ. ಜುಲೈ 5ರಂದು ಮನೆಯಲ್ಲಿ ಕಳೆನಾಶಕ ಸೇವಿಸಿದ್ದರು. ಅವರನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತರಾಗಿದ್ದಾರೆ.
ಜಮೀನಿನಲ್ಲಿ ಮೆಕ್ಕೆಜೋಳ, ಶುಂಠಿ ಬೆಳೆದಿದ್ದರು. ಇದಕ್ಕಾಗಿ ಬ್ಯಾಂಕ್ ಮತ್ತು ಕೈಗಡ ಸಾಲ ಪಡೆದಿದ್ದರು. ಆದರೆ ಬೆಳೆಗೆ ನಿರೀಕ್ಷಿತ ಬೆಲೆ ಸಿಗದೆ ಸಾಲ ತೀರಿಸಲು ಸಾದ್ಯವಾಗಿರಲಿಲ್ಲ. ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200