ಶಿವಮೊಗ್ಗ ಲೈವ್.ಕಾಂ | 1 ಜನವರಿ 2019
ಭದ್ರಾ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಮಿಲ್ಟ್ರಿಕ್ಯಾಂಪ್’ನ ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟಿಸಲಾಯಿತು.


ನೀರು ಹರಿಸುವುದನ್ನು ನಿಲ್ಲಿಸಿ 46 ದಿನ ಕಳೆದಿದೆ. ನೀರು ಹರಿಸಲು ಇದು ಸಕಾಲವಾಗಿದೆ. ಆದ್ದರಿಂದ ಸರ್ಕಾರ ಮತ್ತು ನೀರಾವರಿ ಇಲಾಖೆ ತಡ ಮಾಡದೆ ನಾಲೆಗಳಲ್ಲಿ ನೀರು ಹರಿಸಬೇಕು. ಇಲ್ಲವಾದಲ್ಲಿ ರೈತರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರೈತ ಮುಖಂಡರಾದ ಮಂಜಪ್ಪಗೌಡ, ಯಶವಂತ ರಾವ್ ಘೋರ್ಪಡೆ, ಡಿ.ವಿ.ವೀರೇಶ್, ಕೆ.ಟಿ.ಗಂಗಾಧರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
https://www.youtube.com/watch?v=qwclgBiYkNM
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494ಈ ಮೇಲ್ | [email protected]