SHIVAMOGGA LIVE NEWS | 28 SEPTEMBER 2023
SHIKARIPURA : ಸಾಲಬಾಧೆಯಿಂದ ಮನನೊಂದು ರೈತರೊಬ್ಬರು (Farmer) ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಅರಳಿಹಳ್ಳಿ ಗ್ರಾಮದ ಮಂಜಪ್ಪ (58) ಮೃತ ರೈತ. ಗ್ರಾಮದಲ್ಲಿ ಎರಡೂವರೆ ಎಕರೆ ಜಮೀನು ಹೊಂದಿದ್ದರು. ಕೃಷಿ ಚಟುವಟಿಕೆಗಾಗಿ ವಿವಿಧೆಡೆ ಸಾಲ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಸೆ.26ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದರು. ತಕ್ಷಣ ಅವರನ್ನು ನ್ಯಾಮತಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ – ‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’