ಶಿವಮೊಗ್ಗ ಲೈವ್.ಕಾಂ | SAGARA | 3 ಫೆಬ್ರವರಿ 2020

ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹಲವು ವಸ್ತುಗಳು ಸುಟ್ಟು ಭಸ್ಮವಾಗಿದೆ. ಸಾಗರ ತಾಲೂಕು ಆವಿನಹಳ್ಳಿ ಗ್ರಾಮದ ಸಿಗಂದೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ನಾರಾಯಣಪ್ಪ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಘಟನೆಯಲ್ಲಿ ಬೈಕ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ. ಜಿಲ್ಲಾ ಪಂಚಾಯಿತಿ ಸದಸ್ಯ ಭೀಮನೇರಿ ಶಿವಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ, ನೆರವು ನೀಡಿದರು. ಸಾಗರ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
A fire broke out in farm house near Avianahlli village in Sagara Taluk. Farm house in sigandur road belongs to Narayanappa.