ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಕರೋನ ಎರಡನೆ ಅಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಇದರಿಂದ ಕೋವಿಡ್ ಆತಂಕ ಮತ್ತೆ ಶುರುವಾಗಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ಕರೋನಾಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ಗೆ ಮೃತಪಟ್ಟವರ ಸಂಖ್ಯೆ 350ಕ್ಕೆ ಏರಿಕೆಯಾಗಿದೆ.
ಮೃತರು ಯಾರು? ಎಲ್ಲಿಯವರು?
ಕಡೂರು ಮೂಲದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಎಷ್ಟು ಮಂದಿಗೆ ಪಾಸಿಟಿವ್ ಬಂದಿದೆ?
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದೆ. ಸೋಮವಾರ 2967 ಮಂದಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಸ್ಯಾಂಪಲ್ಗಳ ಪೈಕಿ 2688 ಮಂದಿಗೆ ನೆಗೆಟಿವ್ ಬಂದಿದೆ. 46 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದರಿಂದ ಜಿಲ್ಲೆಯಲ್ಲಿ ಈಗ ಇರುವ ಒಟ್ಟು ಸೋಂಕಿತರ ಸಂಖ್ಯೆ 297ಕ್ಕೆ ಹೆಚ್ಚಳವಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಸೋಂಕಿತರು?
ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 24 ಮಂದಿ, ಭದ್ರಾವತಿಯಲ್ಲಿ ಮೂರು, ಶಿಕಾರಿಪುರದಲ್ಲಿ ಎರಡು, ತೀರ್ಥಹಳ್ಳಿಯಲ್ಲಿ ಮೂವರು, ಸೊರಬದ ಮೂವರು, ಹೊಸನಗರದ ಎರಡು, ಸಾಗರದಲ್ಲಿ ಎಂಟು, ಹೊರ ಜಿಲ್ಲೆಯ ಒಂದು ಪ್ರಕರಣ ಇದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]