ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 DECEMBER 2022
ಶಿವಮೊಗ್ಗ : ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು. ಈ ಮೂಲಕ ಗುಜರಾತ್ ರಾಜ್ಯದ ಮಾದರಿಯನ್ನು ಅನುಸರಿಸಬೇಕು ಎಂದು ಸಂಯುಕ್ತ ಜನತಾದಳದ ಜಿಲ್ಲಾ ಘಟಕ ಆಗ್ರಹಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗುಜರಾತ್ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ರೈತ ಸಹಕಾರಿ ಕೇಂದ್ರಗಳ ಮೂಲಕ ಕಾರ್ಖಾನೆಗಳನ್ನು ನಡೆಸಲಾಗುತ್ತಿದೆ. ಕಾರ್ಖಾನೆಯು ಕಬ್ಬು ಖರೀದಿಸಿದ 15 ದಿನದೊಳಗೆ ಸರ್ಕಾರ ನಿಗದಿಪಡಿಸಿದ ದರದ ಶೇ.82 ರಷ್ಟು ಹಣವನ್ನು ರೈತನ ಖಾತೆಗೆ ವರ್ಗಾಯಿಸಲಿದೆ. ಕಬ್ಬು ನುರಿಯುವ ಹಂಗಾಮು ಮುಗಿದ ಬಳಿಕ ಬಾಕಿ ಹಣವನ್ನು ಪಾವತಿ ಮಾಡಲಾಗುತ್ತಿದೆ. ಇದೆ ಮಾದರಿಯನ್ನು ರಾಜ್ಯದಲ್ಲಿಯು ಅನುಷ್ಠಾನಕ್ಕೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜ್ಯದಲ್ಲಿ 16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. 75 ಸಕ್ಕರೆ ಕಾರ್ಖಾನೆಗಳಿವೆ. ರೈತರಿಂದ ಕಬ್ಬು ಪಡೆದು ಸರಿಯಾದ ಸಮಯಕ್ಕೆ ಹಣ ಪಾವತಿ ಮಾಡುತ್ತಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಗುಜರಾತ್ ಮಾದರಿಯನ್ನು ಅನುಸರಿಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ, ಪೊಲೀಸ್ ಇಲಾಖೆಯಿಂದ 10 ಪಾಯಿಂಟ್ ಗೈಡ್ ಲೈನ್ ಬಿಡುಗಡೆ
ಲಂಚ ಮುಕ್ತ ಕರ್ನಾಟಕದ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ.ಪ್ರಭು, ಕಾರ್ಯದರ್ಶಿ ರವಿ, ಕೆ.ಆರ್.ಎಸ್ ಪಕ್ಷದ ಮಧು, ಶರತ್, ಅಯಾಜ್ ಪ್ರತಿಭಟನೆಯಲ್ಲಿದ್ದರು.